ನವದೆಹಲಿ: ದೇಶದ ಹಲವೆಡೆ ಮುಂಗಾರು ಆರ್ಭಟ ಜೋರಾಗಿದೆ. ಹಾಗಾಗಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಭೂ ವಿಜ್ಞಾನ ಸಚಿವಾಲಯದ ಹೇಳಿಕೆಯ ಪ್ರಕಾರ, ಮುಂದಿನ ನಾಲ್ಕೈದು ದಿನಗಳಲ್ಲಿ ಪೂರ್ವ, ಮಧ್ಯ ಮತ್ತು ಈಶಾನ್ಯ ಭಾರತದ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.