ಕರ್ನಾಟಕ

karnataka

ETV Bharat / bharat

ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ; ಪೊಲೀಸರಿಂದ ಓರ್ವನ ಬಂಧನ - Amith sha Security lapse

ಮುಂಬೈ ಭೇಟಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಭಾರಿ ಲೋಪ ಕಂಡು ಬಂದಿದೆ. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Amit Shah Security Breach
Amit Shah Security Breach

By

Published : Sep 8, 2022, 9:56 AM IST

Updated : Sep 8, 2022, 10:15 AM IST

ಮುಂಬೈ(ಮಹಾರಾಷ್ಟ್ರ):ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈ ಪ್ರವಾಸದಲ್ಲಿ ಭಾರಿ ಪ್ರಮಾಣದ ಭದ್ರತಾ ಲೋಪ ಕಂಡುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾನು ಆಂಧ್ರ ಪ್ರದೇಶದ ಸಂಸದರೊಬ್ಬರ ಆಪ್ತ ಸಹಾಯಕ (ಪಿಎ) ಹಾಗು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೆಂದು ಹೇಳಿ ಭದ್ರತಾ ಸಿಬ್ಬಂದಿಗೆ ನಕಲಿ ಗುರುತಿನ ಚೀಟಿ ತೋರಿಸಿದ್ದಾನೆ ಎಂದು ತಿಳಿದುಬಂದಿದೆ.

ಅಮಿತ್​ ಶಾ ಸುತ್ತಮುತ್ತ ಅನುಮಾನಾಸ್ಪದವಾಗಿ ತಿರುಗಾಡಿದ ಆರೋಪಿಯನ್ನು ಮಹಾರಾಷ್ಟ್ರದ ಧುಲೆ ನಿವಾಸಿ ಹೇಮಂತ್ ಪವಾರ್ ಎಂದು ಗುರುತಿಸಲಾಗಿದೆ. ಈಗಾಗಲೇ ಈತನನ್ನು ಬಂಧಿಸಿರುವ ಪೊಲೀಸರು ಗಿರ್ಗಾಂವ್​ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 5 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

Last Updated : Sep 8, 2022, 10:15 AM IST

ABOUT THE AUTHOR

...view details