ಕೋಲ್ಕತ್ತಾ:ಪಶ್ಚಿಮ ಬಂಗಾಳದ ವಿಶೇಷ ಕೋರ್ಟ್ನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಫೆ. 22ರೊಳಗೆ ಖುದ್ದಾಗಿ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಮಾನನಷ್ಟ ಮೊಕದ್ದಮೆ ಹೂಡಿರುವ ಕಾರಣ ಇದೀಗ ಸಮನ್ಸ್ ಜಾರಿಗೊಳಿಸಲಾಗಿದೆ. ಬಿಧಾನ್ ನಗರದಲ್ಲಿರುವ ವಿಶೇಷ ನ್ಯಾಯಾಲಯದಿಂದ ಇದೀಗ ಸಮನ್ಸ್ ಜಾರಿಯಾಗಿದ್ದು, ಭಾರತೀಯ ದಂಡ ಸಹಿತೆ ಸೆಕ್ಷನ್ 500ರ ಅಡಿ ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಾಗಿದೆ.