ಕರ್ನಾಟಕ

karnataka

ETV Bharat / bharat

ನಕ್ಸಲ್ ಪೀಡಿತ 10 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಸಭೆ - ನಕ್ಸಲ್​

ನಕ್ಸಲ್ ಪೀಡಿತ ಹತ್ತು ರಾಜ್ಯಗಳ ಸಿಎಂಗಳ ಜತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ನಕ್ಸಲ್ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಅಮಿತ್ ಶಾ
ಅಮಿತ್ ಶಾ

By

Published : Sep 26, 2021, 7:17 AM IST

ನವದೆಹಲಿ: ನಕ್ಸಲ್ ಪೀಡಿತ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ಈ ರಾಜ್ಯಗಳಲ್ಲಿನ ಪ್ರಸ್ತುತ ಪರಿಸ್ಥಿತಿ, ಭದ್ರತೆ, ಅಭಿವೃದ್ಧಿ ವಿಚಾರವಾಗಿ ಸಭೆಯಲ್ಲಿ ಚರ್ಚಿಸಲಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ನಕ್ಸಲ್ ಪೀಡಿತ ರಾಜ್ಯಗಳಾದ ಛತ್ತೀಸ್‌ಗಡ, ಜಾರ್ಖಂಡ್, ಬಿಹಾರ, ಒಡಿಶಾ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೇರಳ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಾರೆ. ಅಥವಾ ರಾಜ್ಯ ಪ್ರತಿನಿಧಿಸುವ ಇತರೆ ಅಧಿಕಾರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಛತ್ತೀಸ್​ಗಡದ ನಕ್ಸಲ್​ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ. ಕಳೆದ ಕೆಲವು ವರ್ಷಗಳಲ್ಲಿ ನಕ್ಸಲ್​ ಪಡೆ ಅಲ್ಲಿನ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ, ಅನೇಕ ಸೈನಿಕರನ್ನು ಹತ್ಯೆಗೈದಿದೆ.

ಇದನ್ನೂ ಓದಿ: ಭಯೋತ್ಪಾದನೆಯನ್ನು ಸಾಧನವನ್ನಾಗಿ ಬಳಸಿಕೊಳ್ಳುವ ರಾಷ್ಟ್ರಗಳಿಗೂ ಅದು ಅಪಾಯಕಾರಿ: ಪ್ರಧಾನಿ ಮೋದಿ

ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸಂಜೆಯೇ ದೆಹಲಿಗೆ ಆಗಮಿಸಿದ್ದಾರೆ. 10 ನಕ್ಸಲ್ ಪೀಡಿತ ರಾಜ್ಯಗಳಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗಳ ಬಗ್ಗೆ ಗೃಹ ಸಚಿವ ಅಮಿತ್​ ಶಾ ಪರಿಶೀಲನೆ ನಡೆಸಲಿದ್ದಾರೆ.

ABOUT THE AUTHOR

...view details