ನವದೆಹಲಿ: ದೇಶದಲ್ಲಿ ಮುಂಗಾರು ಮುನ್ನೆಚ್ಚರಿಕೆ ಕ್ರಮಗಳ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಕೇರಳದಲ್ಲಿ ಮೂರು ದಿನಗಳ ಮುಂಚಿತವಾಗಿ ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ ಅಮಿತ್ ಶಾ ಈ ಸಭೆ ಕರೆದಿದ್ದಾರೆ.
ಮುಂಗಾರು ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಎದುರಿಸುವ ಸಿದ್ಧತೆಗಳನ್ನು ಪರಿಶೀಲಿಸುವ ಕುರಿತು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಪ್ರವಾಹ ಮತ್ತು ಡ್ಯಾಂಗಳಲ್ಲಿ ನೀರಿನ ಮಟ್ಟದ ಮೇಲೆ ನಿಗಾ ವಹಿಸಲು ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯ ಬಲಪಡಿಸುವ ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.