ಇಟಾನಗರ(ಅರುಣಾಚಲ ಪ್ರದೇಶ):ಇಲ್ಲಿನ ಪಶ್ಚಿಮ ಸಿಯಾಂಗ್‌ನಲ್ಲಿ ಇಂದು ಬೆಳಗ್ಗೆ 10.31ರ ಸುಮಾರಿಗೆ ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.7 ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.
10 ಕಿ.ಮೀ ಆಳದಲ್ಲಿ ಭೂಕಂಪನ ಆಳದ ಕೇಂದ್ರವನ್ನು ಗುರುತಿಸಲಾಗಿದೆ. ಸುಮಾರು 94.42 ಕಿ.ಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರದ ತಜ್ಞರು ತಿಳಿಸಿದ್ದಾರೆ.