ಇಂದು ಮಧ್ಯಾಹ್ನ 12.35ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ
ಬಂಗಾಳ ಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ 5.1 ತೀವವ್ರತೆಯ ಭೂಕಂಪ
ಈ ಬಗ್ಗೆ ಟ್ವೀಟ್ ಮಾಡಿರುವ ಎನ್ಸಿಎಸ್, ಆಂಧ್ರಪ್ರದೇಶದ ಕಾಕಿನಾಡದಿಂದ 296 ಕಿ.ಮೀ ದೂರದಲ್ಲಿ ಹಾಗೂ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿರುವುದಾಗಿ ತಿಳಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.