ಗಾಜಿಯಾಬಾದ್/ನವದೆಹಲಿ:ಅಫ್ಘಾನಿಸ್ತಾನವನ್ನು ಕಪಿಮುಷ್ಠಿಗೆ ತೆಗೆದುಕೊಂಡಿರುವ ತಾಲಿಬಾನ್ ಉಗ್ರರಿಂದ ಅಲ್ಲಿ ಸಿಲುಕಿದ್ದ 107 ಭಾರತೀಯ ಪ್ರಜೆಗಳು ಸೇರಿದಂತೆ 168 ಮಂದಿಯನ್ನು ಇಂದು ಭಾರತಕ್ಕೆ ಕರೆತರಲಾಗಿದೆ. ಈ ಪೈಕಿ ಪುಟ್ಟ ಮಗುವೊಂದನ್ನು ಪಾಸ್‌ಪೋರ್ಟ್ ಇಲ್ಲದೆಯೇ ಕರೆ ತರಲಾಗಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಂದಮ್ಮಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕಾಬೂಲ್ನಿಂದ ಭಾರತೀಯ ವಾಯುಪಡೆಯ (ಐಎಎಫ್) ಸಿ -17 ವಿಮಾನದಲ್ಲಿ 168 ಮಂದಿ ಗಾಜಿಯಾಬಾದ್ನ ಹಿಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇವರನ್ನು ಬೇರೆಡೆಗೆ ಸ್ಥಳಾಂತರಿಸುವ ಮೊದಲು ಎಲ್ಲರನ್ನೂ ಏರ್ಪೋರ್ಟ್ನಲ್ಲೇ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.