ಅನಂತನಾಗ್ (ಜಮ್ಮು-ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.
ನಿನ್ನೆ ಸಂಜೆಯಿಂದ ಅನಂತನಾಗ್ ಜಿಲ್ಲೆಯ ಕಂದಿಬಾರಾ ಬಿಜ್ಬೆಹಾರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ 9 ಗಂಟೆಯಿಂದ ಉಗ್ರರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.