ಅನಂತನಾಗ್ (ಜಮ್ಮು & ಕಾಶ್ಮೀರ): ಜಮ್ಮು ಕಾಶ್ಮೀರದ ಕುಲ್ಗಾಂನ ಬಿಜೆಪಿ ಕಿಸಾನ್ ಮೋರ್ಚಾದ ಜಿಲ್ಲಾಧ್ಯಕ್ಷ ಜಿ ಎಚ್ ರಸೂಲ್ ದಾರ್ ಮತ್ತು ಅವರ ಪತ್ನಿ ಜವ್ಹಿರಾ ಅವರನ್ನು ಅನಂತನಾಗ್ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ರಸೂಲ್ ದಾರ್ ದಂಪತಿ ಕುಲ್ಗಾಂ ನಿವಾಸಿಗಳಾಗಿದ್ದು, ಅನಂತನಾಗ್ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಪರಿಚಿತ ಬಂದೂಕುಧಾರಿಗಳು ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇವರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.