ಅಮರಾವತಿ: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕರ್ಫ್ಯೂವನ್ನು ಜೂನ್ 20ರ ವರೆಗೆ ವಿಸ್ತರಿಸಿ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ನಿರ್ಬಂಧದ ವೇಳೆ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಅವಧಿಯನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 2ಕ್ಕೆ ಹೆಚ್ಚಿಸಲಾಗಿದೆ. ಕರ್ಫ್ಯೂ ವೇಳೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ.
ಆಂಧ್ರದಲ್ಲಿ ಜೂನ್ 20ರ ವರೆಗೆ ಕರ್ಫ್ಯೂ ವಿಸ್ತರಣೆ - ಆಂಧ್ರ ಪ್ರದೇಶ
ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ನೆರೆಯ ಆಂಧ್ರ ಪ್ರದೇಶದಲ್ಲಿ ಕರ್ಫ್ಯೂವನ್ನು ಜೂನ್ 20ರ ವರೆಗೆ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ನೀಡಿದ್ದ ಸಮಯವನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 2ಕ್ಕೆ ಹೆಚ್ಚಿಸಲಾಗಿದೆ.

COVID-19: ಆಂಧ್ರದಲ್ಲಿ ಜೂನ್ 20ರ ವರೆಗೆ ಕರ್ಫ್ಯೂ ವಿಸ್ತರಣೆ
ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದ ಅಗ್ರ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶವೂ ಸೇರಿತ್ತು. ಆದ್ರೆ ಕಠಿಣ ನಿರ್ಬಂಧಗಳನ್ನು ವಿಧಿಸಿದ ಬಳಿಕ ಸೋಂಕಿತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ. ಆಂಧ್ರದಲ್ಲಿ ಸದ್ಯ 10 ಸಾವಿರಕ್ಕೂ ಕಡಿಮೆ ಕೇಸ್ ದಾಖಲಾಗುತ್ತಿವೆ.