ಹೈದರಾಬಾದ್:ತಮಿಳುನಾಡಿನ ನೀಲಿಗಿರಿಯ ಕುನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ಅವಘಡದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಕೆಲವರು ಅತಿ ಕಡಿಮೆ ವಯಸ್ಸಿನ ಯೋಧರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ನಡೆದಿರುವ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಕೇವಲ 27 ವರ್ಷದ ಲ್ಯಾನ್ಸ್ ನಾಯ್ಕ್ ಸಾಯಿ ತೇಜ್ ನಿಧನರಾಗಿದ್ದಾರೆ. ಬಿಪಿನ್ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಆಗಿದ್ದ ಸಾಯಿ ತೇಜ್ ಮೂಲತಃ ಆಂಧ್ರಪ್ರದೇಶದವರು. 2012ರಲ್ಲಿ ಭಾರತೀಯ ಸೇನೆಯ ಬೆಂಗಳೂರು ರೆಜಿಮೆಂಟ್ಗೆ ಸೇರಿದ್ದ ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅದರಲ್ಲಿ ಮೂರು ವರ್ಷದ ಗಂಡು ಮಗು ಹಾಗೂ ಎರಡು ವರ್ಷದ ಹೆಣ್ಣು ಮಗುವಿದೆ. ಕಳೆದ ಕೆಲ ದಿನಗಳ ಹಿಂದೆ ಇವರು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ಸೇರಿಕೊಂಡಿದ್ದರು.