ಕರ್ನಾಟಕ

karnataka

ETV Bharat / bharat

ಗಣೇಶ ಪೆಂಡಲ್​ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು - ಈಟಿವಿ ಭಾರತ್​ ಕನ್ನಡ ನ್ಯೂಸ್

ಗಣೇಶ ಪೆಂಡಲ್​ನಲ್ಲಿ ಎಲೆಕ್ಟ್ರಿಕ್‌ ಮೈಕ್‌ ಹಿಡಿದುಕೊಂಡಿದ್ದ ಯುವಕನಿಗೆ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.

ಗಣೇಶ ಪೆಂಡಲ್​ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ಗಣೇಶ ಪೆಂಡಲ್​ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

By ANI

Published : Sep 26, 2023, 6:35 PM IST

ಶ್ರೀಕಾಕುಳಂ(ಆಂಧ್ರಪ್ರದೇಶ) : ಶ್ರೀಕಾಕುಳಂ ಜಿಲ್ಲೆಯ ಸುನ್ನಡ ಗ್ರಾಮದ ಗಣೇಶ ಪೆಂಡಲ್​ವೊಂದರಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಸುನ್ನಡ ಗ್ರಾಮದ ಸುರೇಶ್ ಕುಮಾರ್ (28) ಎಂದು ಗುರುತಿಸಲಾಗಿದೆ.

ಸುನ್ನಡ ಗ್ರಾಮದಲ್ಲಿ ಚತುರ್ಥಿ ದಿನದಂದು ಗಣೇಶ ಪ್ರತಿಷ್ಠಾಪನೆ ಮಾಡಿದ್ದು, ಮಂಗಳವಾರ ಆಯೋಜಕರು ಗಣೇಶ ಪಂದಳ ಮತ್ತು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಘೋಷಣೆಗಾಗಿ ಎಲೆಕ್ಟ್ರಿಕ್‌ ಮೈಕ್‌ ಹಿಡಿದಿದ್ದ ಸುರೇಶ್​ ಕುಮಾರ್‌ಗೆ ಏಕಾಏಕಿ ವಿದ್ಯುತ್‌ ತಗುಲಿದ ಪರಿಣಾಮ ಸಾವನ್ನಪ್ಪಿದ್ದಾನೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಲಾಸ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈಗಾಗಲೇ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಕಾಸಿಬುಗ್ಗ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀನಿವಾಸ್​ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ :ಮಣಿಪುರ ಹಿಂಸಾಚಾರ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ABOUT THE AUTHOR

...view details