ವಿಜಯವಾಡ (ಆಂಧ್ರಪ್ರದೇಶ):ಬಂಡಲ್‌ಗಟ್ಟಲೆವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲು ಆಂಧ್ರಪ್ರದೇಶ ಪೊಲೀಸರು ಯಶಸ್ವಿಯಾಗಿದ್ದು, ಇವುಗಳ ಒಟ್ಟು ಮೌಲ್ಯ ಬರೋಬ್ಬರಿ 3.5 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.
ಹರಿಯಾಣದಿಂದ ಈ ಸಿಗರೇಟ್‌ಗಳನ್ನು ಅಕ್ರಮವಾಗಿ ತರಿಸಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದ್ದು, ಆಂಧ್ರಪ್ರದೇಶದ ವಿವಿಧ ಸ್ಥಳಗಳಿಗೆ ಸಾಗಣೆ ಮಾಡಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈಗಾಗಲೇ ಓರ್ವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.