ಅಮರಾವತಿ (ಆಂಧ್ರಪ್ರದೇಶ): ಆಂಧ್ರಪ್ರದೇಶದಲ್ಲಿ ಈವರೆಗೆ 2,303 ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅಲ್ಲದೇ 157 ಮಂದಿ ಬ್ಲ್ಯಾಕ್ ಫಂಗಸ್ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವೈದ್ಯಕೀಯ ಮತ್ತು ಆರೋಗ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಸಿಂಘಾಲ್ ತಿಳಿಸಿದ್ದಾರೆ.
ಅಮರಾವತಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಿಂಘಾಲ್, ಆಂಧ್ರದಲ್ಲಿ ಇಲ್ಲಿಯವರೆಗೆ ಪತ್ತೆಯಾಗಿರುವ 2,303 ಕಪ್ಪು ಶಿಲೀಂಧ್ರ ಪ್ರಕರಣಗಳ ಪೈಕಿ 1,328 ಕೇಸ್ಗಳು ಸಕ್ರಿಯವಾಗಿವೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಆಂಫೊಟೆರಿಸಿನ್-ಬಿ ಇಂಜೆಕ್ಷನ್ ಮತ್ತು ಪೋಸಾಕೋನಾಜೋಲ್ ಮಾತ್ರೆಗಳು ರಾಜ್ಯಾದ್ಯಂತ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾದಿಂದ ಮೃತಪಟ್ಟ ವೈದ್ಯಕೀಯ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ