ಮುಂಬೈ(ಮಹಾರಾಷ್ಟ್ರ):100 ಕೋಟಿ ರೂಪಾಯಿ ಭ್ರಷ್ಟಾಚಾರ ಹಗರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದಿಂದ ಜೈಲು ಶಿಕ್ಷೆಗೆ ಒಳಗಾಗಿದ್ದ ಎನ್‌ಸಿಪಿ ನಾಯಕನಿಗೆ ರಿಲೀಫ್ ಸಿಕ್ಕಿದೆ.
ಅಕ್ರಮ ಹಣ ವರ್ಗಾವಣೆ, 100 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣ ಪ್ರಕರಣ ದಾಖಲಿಸಿಕೊಂಡ ಇಡಿ ಅನಿಲ್ ದೇಶ್ಮುಖ್ ಅವರನ್ನು ಬಂಧಿಸಿತ್ತು. ಬಳಿಕ ಸಿಬಿಐನಿಂದಲೂ ತನಿಖೆಗೆ ಒಳಗಾಗಿ ಜೈಲು ಪಾಲಾಗಿದ್ದರು. ಜಾಮೀನು ಕೋರಿ ಮಾಜಿ ಗೃಹ ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.