ಮುಂಬೈ (ಮಹಾರಾಷ್ಟ್ರ):100 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಮುಂಬೈನ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ನವೆಂಬರ್ 1 ರಂದು ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಅಂದಿನಿಂದ ಇಂದಿನ ವರೆಗೂ ಅನಿಲ್ ದೇಶಮುಖ್ಗೆ ರಿಲೀಫ್ ಸಿಕ್ಕಿಲ್ಲ. ಇಂದಾದರೂ ಬಂಧನದಿಂದ ಮುಕ್ತಿ ಸಿಗಬಹುದು ಅಂದುಕೊಂಡಿದ್ದ ಅವರಿಗೆ ಮತ್ತೆ ನಿರಾಸೆಯಾಗಿದೆ. ಪ್ರಸ್ತುತ ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.