ಚೆನ್ನೈ, ತಮಿಳುನಾಡು:ಕೇಂದ್ರ ಸಚಿವ ಸಂಪುಟದಲ್ಲಿ ಪುನರ್ರಚನೆಯಾದ ಬೆನ್ನಲ್ಲೇ ತಮಿಳುನಾಡು ಬಿಜೆಪಿಯಲ್ಲೂ ಭಾರಿ ಬದಲಾವಣೆಗಳನ್ನು ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ, ತಕ್ಷಣದದಿಂದಲೇ ಜಾರಿಗೆ ಬರುವಂತೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ನೇಮಿಸಿದ್ದಾರೆ.
ಈ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಕಚೇರಿ ಉಸ್ತುವಾರಿಯಾದ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಹೊಸ ಜವಾಬ್ದಾರಿ ಬಂದಿದೆ.