ಚೆನ್ನೈ (ತಮಿಳುನಾಡು):ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅಣ್ಣಾಮಲೈಗೆ ಕೊರೊನಾ : ಆಸ್ಪತ್ರೆಗೆ ದಾಖಲಾದ ಅರವಕುರಿಚಿ ಬಿಜೆಪಿ ಅಭ್ಯರ್ಥಿ - Annamalai tweet
ತಮ್ಮ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಜಿ ಐಪಿಎಸ್ ಅಧಿಕಾರಿ, ಅರವಕುರಿಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ತಿಳಿಸಿದ್ದಾರೆ.
ಅಣ್ಣಾಮಲೈಗೆ ಕೊರೊನಾ
ಈ ಬಗ್ಗೆ ಟ್ವೀಟ್ ಮಾಡಿರುವ ಅಣ್ಣಾಮಲೈ, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿರುವೆ. ಕೆಲ ದಿನಗಳಿಂದ ನನ್ನ ಸುತ್ತಮುತ್ತಲೂ ಇದ್ದವರು ಯಾವುದೇ ರೋಗಲಕ್ಷಣಗಳು ಕಂಡುಬಂದರೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಏ.6ರಂದು ತಮಿಳುನಾಡು ವಿಧಾನಸಭೆ ಚುನಾವಣೆ ನಡೆದಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.