ಮುಂಬೈ :ಉಕ್ರೇನ್ನಲ್ಲಿ ಸಿಲುಕಿದ್ದ 182 ಭಾರತೀಯರನ್ನು ಹೊತ್ತ 7ನೇ ವಿಮಾನ ಇಂದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಕೇಂದ್ರ ಸಚಿವ ನಾರಾಯಣ ರಾಣೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದಾರೆ.
ಉಕ್ರೇನ್ನಿಂದ ಬಂದ ಎಲ್ಲರನ್ನು ಸ್ವಾಗತಿಸುತ್ತೇನೆ. ಅಲ್ಲಿನ ಪರಿಸ್ಥಿತಿಯಿಂದ ಎಲ್ಲರೂ ಗಾಬರಿಗೊಂಡಿದ್ದಾರೆ, ನೀವೆಲ್ಲರೂ ಸುರಕ್ಷಿತವಾಗಿ ಬಂದಿದ್ದೀರಿ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಏರ್ಪೋಟ್ನಲ್ಲಿ ಸಚಿವ ರಾಣೆ ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ.