ಬಾಲಿವುಡ್ ನಟಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತೆ ಸಿನಿಮಾ ಅಂಗಳಕ್ಕೆ ಇಳಿದಿದ್ದಾರೆ. ಅದೂ ಒಬ್ಬ ಬೌಲರ್ ಆಗಿ. ಭಾರತೀಯ ಮಹಿಳಾ ಕ್ರಿಕೆಟ್ನ ಲೆಜೆಂಡ್ ಎಂದೇ ಗುರುತಿಸಿಕೊಂಡ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಸಿನಿಮಾ 'ಚಕ್ಡಾ ಎಕ್ಸ್‌ಪ್ರೆಸ್'ನಲ್ಲಿ ಅನುಷ್ಕಾ ಶರ್ಮಾ ನಟಿಸಿದ್ದಾರೆ.
ಈ ಕುರಿತು ಅವರೇ ಸಿನಿಮಾದ ಟೈಟಲ್ ಪೋಸ್ಟರ್ ಮತ್ತು ಟೀಸರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾ ನೆಟ್‍ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.