ಅನಕಾಪಲ್ಲಿ(ಆಂಧ್ರಪ್ರದೇಶ): ಸರ್ಕಾರಿ ಆಸ್ಪತ್ರೆಗಳಂದ್ರೆ ಬಡವರ ಪಾಲಿಗೆ ಸಂಜೀವಿನಿ ಅಂತಾರೆ. ಆದ್ರೆ, ಆಂಧ್ರಪ್ರದೇಶದ ನರಸೀಪಟ್ನಂನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಅನಕಾಪಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಬೇಸತ್ತು ರೋಗಿಗಳು ಕಣ್ಣೀರು ಹಾಕುತ್ತಿದ್ದಾರೆ.
ಏಪ್ರಿಲ್ 6ರಂದು ಸುಮಾರು ಎಂಟು ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಕಾರಣ, ಗರ್ಭಿಣಿಯೋರ್ವಳಿಗೆ ಮೇಣದ ಬತ್ತಿ ಮತ್ತು ಮೊಬೈಲ್ ಟಾರ್ಚ್ ಬೆಳಕಿನ ಸಹಾಯದಿಂದ ಹೆರಿಗೆ ಮಾಡಿಸಲಾಗಿದೆ. ಪ್ರತಿದಿನ ವಿದ್ಯುತ್ ಕಡಿತದಂತಹ ಸಮಸ್ಯೆ ಉಂಟಾಗುತ್ತಿರುವ ಕಾರಣ ಇಲ್ಲಿನ ರೋಗಿಗಳು ಇನ್ನಿಲ್ಲದ ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲೆಯಲ್ಲೇ ಅತಿದೊಡ್ಡ ಆಸ್ಪತ್ರೆಯಾಗಿದ್ದರೂ ಕೂಡ, ಮೂಲಭೂತ ಸೌಲಭ್ಯಗಳಿಲ್ಲ. ಜನರೇಟರ್ ಹಾಳಾಗಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ.