ನವದೆಹಲಿ:10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸದಾಗಿ ಪರಿಚಯಿಸಲಾಗುರುವ 'ವರ್ಷಕ್ಕೆ ಎರಡು ಬಾರಿ ಪರೀಕ್ಷೆ'ಗೆ ನಿಯಮ ಕಡ್ಡಾಯವಲ್ಲ. ಅವರು 2 ಸಲ ಪರೀಕ್ಷೆ ಬರೆಯಲೇಬೇಕಿಲ್ಲ. ಬೇಕಾದಲ್ಲಿ ಅವರು ಎರಡರ ಪೈಕಿ ಒಂದು ಪರೀಕ್ಷೆಯಲ್ಲಿ ಗಳಿಸಿದ ಹೆಚ್ಚಿನ ಅಂಕಗಳನ್ನೇ ಅವರು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.
ಈ ನಿಯಮವು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಇರುವಂತೆ ವರ್ಷಕ್ಕೆ ಎರಡು ಬಾರಿ ಎಕ್ಸಾಂ ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಅವರು ಉತ್ತಮ ಅಂಕಗಳನ್ನು ಆಯ್ಕೆ ಮಾಡಬಹುದು. ಇದು ಸಂಪೂರ್ಣವಾಗಿ ಐಚ್ಛಿಕವಾಗಿರುತ್ತದೆಯೇ ಹೊರತು ಯಾವುದೇ ಒತ್ತಡ ಇರುವುದಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಒಂದು ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ಪರಿಚಯಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದರು.
ಎರಡು ಪರೀಕ್ಷೆ ಬೇಡವಾದಲ್ಲಿ ಒಂದೇ ಸಾಕು:ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಉತ್ತಮ ಶೈಕ್ಷಣಿಕ ಸಾಧನೆ ಮಾಡದ ಶಾಲೆಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ಅವುಗಳನ್ನು ಪರಾಮರ್ಶೆ ಮಾಡಿ, ಗಂಭೀರ ಚರ್ಚೆ ನಡೆಸುವ ಸಮಯ ಬಂದಿದೆ. ಯಾವುದೇ ವಿದ್ಯಾರ್ಥಿಯು ತಾನು ಬರೆದ ಮೊದಲ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದೇನೆ. ಮುಂದಿನ ಪರೀಕ್ಷೆಗೆ ಕೂರುವ ಅಗತ್ಯವಿಲ್ಲ ಎಂದಾದಲ್ಲಿ ಅವರು, ಪರೀಕ್ಷೆಯಿಂದ ಹೊರಗುಳಿಯಬಹುದು ಎಂದು ಅವರು ಮಾಹಿತಿ ನೀಡಿದರು.
ವರ್ಷಕ್ಕೆ ಎರಡು ಬಾರಿ ಮುಖ್ಯ ಪರೀಕ್ಷೆಗಳನ್ನು ನಡೆಸುವ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದ್ದೇವೆ. ಹೊಸ ಪಠ್ಯಕ್ರಮ ವಿಧಾನ (ಎನ್‌ಸಿಎಫ್) ಘೋಷಿಸಿದ ನಂತರ ಹಲವು ವಿದ್ಯಾರ್ಥಿಗಳನ್ನು ಭೇಟಿ ಮಾಡಲಾಗಿದೆ. ಅವರು ಇದನ್ನು ಶ್ಲಾಘಿಸಿದ್ದಾರೆ. 2024 ರಿಂದ ವರ್ಷಕ್ಕೆ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.