ಕರ್ನಾಟಕ

karnataka

ETV Bharat / bharat

ಎಸ್​ಬಿಐನಲ್ಲಿ 868 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಎಸ್​ಬಿಐನ ಆರ್ಥಿಕ ಸೇರ್ಪಡೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ ಮಾಡಲಾಗಿದೆ.

Application Invitation for 868 Business Correspondent Facilitator Posts in SBI
Application Invitation for 868 Business Correspondent Facilitator Posts in SBI

By

Published : Mar 11, 2023, 10:41 AM IST

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (ಎಸ್​ಬಿಐ) ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 868 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುವುದು. ಒಂದು ವರ್ಷದಿಂದ ಮೂರು ವರ್ಷದವರೆಗೆ ಈ ಹುದ್ದೆ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಗೊಂಡ ಅಭ್ಯರ್ಥಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಎಸ್​​ಬಿಐನಲ್ಲಿ ಈಗಾಗಲೇ ಕೆಲಸ ಮಾಡಿ ನಿವೃತ್ತಿ ಹೊಂದಿರುವ ಅಧಿಕಾರಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ವಿವರ, ಅರ್ಜಿ ಸಲ್ಲಿಕೆ ಮಾಹಿತಿ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಹೀಗಿದೆ.

ಹುದ್ದೆ ಅಧಿಸೂಚನೆ

ಹುದ್ದೆ ವಿವರ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಆರ್ಥಿಕ ಸೇರ್ಪಡೆ ಇಲಾಖೆ (ಎಫ್​ಐ) ಖಾಲಿ ಇರುವ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್​ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇದ್ದು, ದೇಶಾದ್ಯಂತ 868 ಹುದ್ದೆ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ನಿಯಮಾನುಸಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರತಕ್ಕದ್ದು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಾನ ಮಾರ್ಚ್​ 10ಕ್ಕೆ 65 ವರ್ಷ ಮೀರಿರಬಾರದು. ಪ.ಜಾ, ಪ.ಪಂ, ಪ್ರವರ್ಗ 1 ಸೇರಿದಂತೆ ಉಳಿದ ವರ್ಗಗಳಿಗೆ ಎಸ್​ಬಿಐ ಅನುಸಾರ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಸ್​ಬಿಐನಲ್ಲಿ 30 ವರ್ಷ ಸೇವಾ ನಿಯಮ ಪಾಲನೆ ಮಾಡಿರಬೇಕು.

ವೇತನ:ಎಸ್​ಬಿಐ ನಿಯಮ ಅನುಸಾರ ಅಭ್ಯರ್ಥಿಗಳಿಗೆ ಮಾಸಿಕ 40 ಸಾವಿರ ವೇತನವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶಾರ್ಟ್​ ಲಿಸ್ಟ್​ ಮಾಡಿ ಬಳಿಕ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುವುದು. ನಂತರ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್​ಬಿಐ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲಿ ಅಧಿಸೂಚನೆಯನ್ನು ಮತ್ತೊಮ್ಮೆ ಪರಿಶೀಲಿಸಿ, ಸೂಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕವೇ ಅಗತ್ಯ ದಾಖಲೆಗಳ ಮಾಹಿತಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಈಗಾಗಲೇ ಎಸ್​ಬಿಐನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಬ್ಯಾಂಕ್​ ನೌಕರರ ಕಾರ್ಯ ನಿರ್ವಹಣೆ ಅವಧಿಯಲ್ಲಿ ಈ ಅಭ್ಯರ್ಥಿಗಳು ಕೂಡ ಕಾರ್ಯ ನಿರ್ವಹಿಸಲಿದ್ದಾರೆ.

ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಮಾರ್ಚ್​ 31 ಆಗಿದೆ.

ಈ ಹುದ್ದೆ ಸಂಬಂಧಿಸಿದ ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ವೀಕ್ಷಿಸಲು ಅಭ್ಯರ್ಥಿಗಳು ಎಸ್​ಬಿಐ ಅಧಿಕೃತ ಜಾಲತಾಣವಾದsbi.co.in ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕರ್ನಾಟಕ ಹೈ ಕೋರ್ಟ್​ ನೇಮಕಾತಿ: ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details