ಚಂಡೀಗಢ( ಪಂಜಾಬ್):ಒಂದು ಕಡೆ ಮೊಹಾಲಿ ಚಂಡೀಗಢದಲ್ಲಿ ರೈತರ ಧರಣಿ ನಡೆಯುತ್ತಿದ್ದರೆ, ಇನ್ನೊಂದೆಡೆ ಸಿಎಂ ಭಗವಂತ್ ಮಾನ್ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಸಭೆಯಲ್ಲಿ ಪ್ರತಿ ಎಕರೆಗೆ 1500 ರೂ.ಗಳ ಸಹಾಯ ಧನ ನೀಡುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿಎಂ ಸಭೆ ಬಳಿಕ ಟ್ವೀಟ್ ಕೂಡಾ ಮಾಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?:ಪ್ರತಿ ಎಕರೆಗೆ 1500 ರೂ. ಸಹಾಯಧನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಟ್ವೀಟ್ನಲ್ಲಿ ಭಗವಂತ್ ಮಾನ್ ಹೇಳಿದ್ದಾರೆ. ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೇರವಾಗಿ ಜೋಶೆನ್ ಬಿತ್ತನೆ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಿಎಂ ಮಾನ್ ಟ್ವೀಟ್ ನಲ್ಲಿ ರಾಜ್ಯದ ರೈತರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ, ಈ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹಿಸಬೇಕು. ನೆಲ, ಜಲ ಉಳಿಸಲು ಎಲ್ಲರೂ ಮುಂದಾಗಬೇಕು ಎಂದು ಮನವಿ ಮಾಡಿರುವ ಅವರು, ಇದರ ಜತೆಗೆ ಸಂಪುಟ ಸಭೆಯ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.