ಶ್ರೀನಗರ(ಜಮ್ಮು ಕಾಶ್ಮೀರ):ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಜಮ್ಮುವಿಗೆ ಭೇಟಿ ನೀಡಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಸೇನಾ ಕಾರ್ಯಾಚರಣೆಗಳ ಸಿದ್ಧತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ ಮತ್ತು ರಜೌರಿಯ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ನರವಾಣೆ ಇದು ಎರಡನೇ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
ಸೇನಾ ಸಿಬ್ಬಂದಿಯ ಮುಖ್ಯಸ್ಥ ನರವಾಣೆ ಜಮ್ಮು ಪ್ರದೇಶಕ್ಕೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಸೇನೆ ಮತ್ತು ಕಮಾಂಡರ್ಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಇದಕ್ಕೂ ಮೊದಲು ಅಕ್ಟೋಬರ್ 18 ಮತ್ತು 19ರಂದು ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.