ಬೆಂಗಳೂರು:ದೇಶದ ಜನರ ಪ್ರಾರ್ಥನೆ ಫಲಿಸಿಲ್ಲ. ಇತ್ತೀಚೆಗೆ ತಮಿಳುನಾಡಿನಲ್ಲಿ ಸೇನಾ ಸಂಭವಿಸಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನದ ಬಗ್ಗೆ ಟ್ವೀಟ್ ಮಾಡಿರುವ ಭಾರತೀಯ ವಾಯುಸೇನೆ, ಇದು ಅತ್ಯಂತ ದುಃಖಕರ ಘಟನೆ ಎಂದು ಕಂಬನಿ ಮಿಡಿದಿದೆ.
ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಸಿಬ್ಬಂದಿ ಸೇರಿ 14 ಮಂದಿ ಇದ್ದ ಹೆಲಿಕಾಪ್ಟರ್ ತಮಿಳುನಾಡಿನ ಕುನೂರು ಬಳಿ ಇದೇ ಡಿಸೆಂಬರ್ 8 ರಂದು ಪತನವಾಗಿತ್ತು. ದುರಂತದಲ್ಲಿ 12 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಸಿಡಿಎಸ್ ಬಿಪಿನ್ ರಾವತ್ ಹಾಗೂ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಬಿಪಿನ್ ರಾವತ್ ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.