ಕರ್ನಾಟಕ

karnataka

ETV Bharat / bharat

ಶಸ್ತ್ರಸಜ್ಜಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ - ಶಸ್ತ್ರಸಜ್ಜಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಪ್ರಯತ್ನಿಸುತ್ತಿದ್ದವರ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಭಾರತೀಯ ಸೇನೆ
ಭಾರತೀಯ ಸೇನೆ

By

Published : Sep 4, 2021, 7:18 AM IST

ಪೂಂಚ್ (ಜಮ್ಮು): ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪಿನ ಒಳನುಸುಳುವಿಕೆ ಪ್ರಯತ್ನವನ್ನು ಸೈನಿಕರು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ ಎಚ್ಚರಿಕೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನ ಪತ್ತೆಯಾಗಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ. ಗುರುವಾರ ರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಒಳನುಸುಳಲು ಪ್ರಯತ್ನಿಸಿತು. ಅವರ ಪ್ರಯತ್ನವನ್ನು ವಿಫಲಗೊಳಿಸಲು ಗುಂಡಿನ ದಾಳಿ ನಡೆಸಲಾಯಿತು ಎಂದು ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಗಡಿಯಲ್ಲಿ ಭಾರಿ ಗಿಡಗಂಟಿಗಳಿರುವುದರಿಂದ, ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಶೋಧ ನಡೆಸಲಾಗಿದ್ದು, ಅಪಾರ ಪ್ರಮಾಣದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಬಟ್ಟೆ, ಆಹಾರ ಪದಾರ್ಥಗಳು, ಪಾಕಿಸ್ತಾನದ ಮುದ್ರೆಯಿರುವ ಔಷಧಿಗಳಿವೆ ಎಂದು ಕರ್ನಲ್ ಆನಂದ್ ತಿಳಿಸಿದ್ದಾರೆ.

ಇದನ್ನೂ ಓದಿ: LOCಯಲ್ಲಿ NDA ನೇತೃತ್ವದ ಅಧಿಕಾರವಧಿಯಲ್ಲಿ ಅತಿ ಹೆಚ್ಚು ಸಾವು-ನೋವು : RTI ವರದಿಯಿಂದ ಬಹಿರಂಗ

ದೇಶಕ್ಕೆ ಸಂಚಕಾರ ತರುವ ಯಾವುದೇ ಗುಂಪನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಭಾರತೀಯ ಸೇನೆ ಹೊಂದಿದೆ ಎಂದು ಅವರು ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ABOUT THE AUTHOR

...view details