ಕೋಹಿಮಾ, ನಾಗಾಲ್ಯಾಂಡ್ :ಮೋನ್ ಜಿಲ್ಲೆಯಲ್ಲಿ ನಡೆದ 13 ನಾಗರಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನೆಯು ನ್ಯಾಯಾಲಯ ವಿಚಾರಣೆಗೆ ಭಾನುವಾರ ಆದೇಶಿಸಿದೆ. ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದೆ.
ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಸಂಘಟನೆಯ ಉಗ್ರರೆಂದು ತಪ್ಪಾಗಿ ಭಾವಿಸಿ, ಫೈರಿಂಗ್ ಮಾಡಲಾಗಿತ್ತು ಎಂದು ನ್ಯಾಗಾಲ್ಯಾಂಡ್ ಪೊಲೀಸರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಸೇನೆಯೂ ಹೇಳಿಕೆ ನೀಡಿದೆ.
ಘಟನೆದುರದೃಷ್ಟಕರ, ಅತ್ಯಂತ ಖಂಡನೀಯ :ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ನಾಗರಿಕರ ಹತ್ಯೆಗೆ ಕಾರಣವಾದ ದುರದೃಷ್ಟಕರ ಘಟನೆ ಅತ್ಯಂತ ಖಂಡನೀಯವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.