ಕರ್ನಾಟಕ

karnataka

ETV Bharat / bharat

ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 9 ಯೋಧರ ದುರ್ಮರಣ

Army vehicle plunges into gorge: ಲಡಾಖ್‌ನಲ್ಲಿ ಸೇನಾ ವಾಹನ ಆಳವಾದ ಕಂದಕಕ್ಕೆ ಬಿದ್ದಿದೆ. ಇದರ ಪರಿಣಾಮ ಒಂಬತ್ತು ಯೋಧರು ದುರ್ಮರಣ ಹೊಂದಿದ್ದಾರೆ.

Army personnel feared dead after their vehicle plunges into deep gorge in Ladakh
ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 9 ಜನ ಸೈನಿಕರ ದುರ್ಮರಣ

By

Published : Aug 19, 2023, 9:02 PM IST

Updated : Aug 19, 2023, 10:13 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಜನ ಸೈನಿಕರು ಮೃತಪಟ್ಟಿದ್ದಾರೆ. ಲೇಹ್ ಜಿಲ್ಲೆಯ ಕಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ಶನಿವಾರ ಈ ದುರ್ಘಟನೆ ನಡೆದಿದೆ.

ಇಂದು ಸಂಜೆ ಹತ್ತು ಜನ ಭದ್ರತಾ ಸಿಬ್ಬಂದಿ ಇದ್ದ ಸೇನಾ ವಾಹನವು ಲೇಹ್‌ನಿಂದ ನ್ಯೋಮಾಗೆ ತೆರಳಿತ್ತು. ಈ ವೇಳೆ ಸಂಜೆ 4.45ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ವಾಹನವು ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಇದರಲ್ಲಿ ಒಂಬತ್ತು ಜನ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಲೇಹ್‌ನ ಹಿರಿಯ ಪೊಲೀಸ್ ಅಧೀಕ್ಷಕಿ ಪಿಡಿ ನಿತ್ಯಾ ಮಾಹಿತಿ ನೀಡಿ, ''ಸೇನಾ ವಾಹನವು ಕಮರಿಗೆ ಬಿದ್ದ ಮಾಹಿತಿ ಅರಿತು ಪೊಲೀಸ್​ ತಂಡ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿತು. ಗಾಯಗೊಂಡ ಎಲ್ಲ ಸೈನಿಕರನ್ನು ಸಮೀಪದ ಸೇನಾ ಆಸ್ಪತ್ರೆಗೆ ರವಾನಿಸಲಾಯಿತು. ಅಷ್ಟರಲ್ಲೇ ಎಂಟು ಯೋಧಕರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು'' ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ''ಇದಾದ ನಂತರ ಮತ್ತೊಬ್ಬ ಯೋಧ ಕೂಡ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಸೈನಿಕನಿಗೆ ಚಿಕಿತ್ಸೆ ಮುಂದುವರೆದಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ'' ಎಂದು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಈ ಘಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್​ ಮಾಡಿ, ಮೃತ ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

''ಲಡಾಖ್‌ನ ಲೇಹ್ ಬಳಿ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ದುಃಖತಪ್ತ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಗೊಂಡ ಸಿಬ್ಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ'' ಎಂದು ಸಚಿವ ರಾಜನಾಥ್ ಸಿಂಗ್ ಟ್ವೀಟ್​ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ:Cobra Commando: ಎಕೆ 47 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ

Last Updated : Aug 19, 2023, 10:13 PM IST

ABOUT THE AUTHOR

...view details