ನವದೆಹಲಿ :2020ರಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ 200ಕ್ಕೂ ಹೆಚ್ಚು ರೈತರು ಜಂತರ್‌ಮಂತರ್‌ನಲ್ಲಿ ನಾಳೆ ಪ್ರತಿಭಟನೆ ನಡೆಸಲಿದ್ದಾರೆ.
ರೈತರು ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಲು ಅವಕಾಶ ನೀಡಲಾಗಿದೆ. ಸಂಸತ್ತಿನ ಕಡೆಗೆ ಮೆರವಣಿಗೆ ಮಾಡದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅನ್ನದಾತರ ಪ್ರತಿಭಟನೆಗೆ ಅನುಮತಿ ನೀಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 11: 30ರ ವೇಳೆಗೆ ರೈತರು ಪ್ರತಿಭಟನಾ ಸ್ಥಳವನ್ನು ತಲುಪುವ ನಿರೀಕ್ಷೆಯಿರುವುದರಿಂದ ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ ಎಂತಲೂ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಆದರೆ BJPಗೆ ಮತ ನೀಡದಂತೆ ಮನವಿ ಮಾಡುತ್ತೇವೆ: ಟಿಕಾಯತ್
ದೆಹಲಿಯಲ್ಲಿ ಮುಂಗಾರು ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಜುಲೈ 22ರಿಂದ ಪ್ರತಿದಿನ ಸುಮಾರು 200 ರೈತರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಬೇಕೆಂದು ರೈತ ಸಂಘಗಳ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಹಿಂದೆ ಯೋಜಿಸಿತ್ತು.
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಆಗಸ್ಟ್ 13ರವರೆಗೆ ನಡೆಯಲಿದೆ. ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ-2020 ಹಿಂಪಡೆಯಬೇಕೆಂದು ಕೋರಿ 2020ರ ನವೆಂಬರ್‌ನಿಂದ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.