ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಕ್ರೌರ್ಯ ಮುಂದುವರಿದಿದೆ. ಹೀಗಾಗಿ ದೇಶ ತೊರೆಯಲು ಪ್ರಜೆಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸುತ್ತಿದ್ದಾರೆ. ಪರಿಣಾಮ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಈ ನಡುವೆ ಭಾರತೀಯ ಪ್ರಜೆಗಳ ಸುರಕ್ಷಿತ ಸ್ಥಳಾಂತರ ಮುಂದುವರಿದಿದ್ದು, ಈಗಾಗಲೇ ನೂರಾರು ಮಂದಿಯನ್ನ ತಾಯ್ನಾಡಿಗೆ ಕರೆತರಲಾಗಿದೆ. ಇಂದೂ ಸಹ ಭಾರತೀಯರ ಸ್ಥಳಾಂತರ ಕಾರ್ಯ ನಡೆಯಲಿದ್ದು, ಸುಮಾರು 300 ಮಂದಿ ವಾಪಸಾಗುವ ಸಾಧ್ಯತೆ ಇದೆ.
ಈ ನಡುವೆ 87 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ ವಿಮಾನ ತಜಿಕಿಸ್ತಾನದಿಂದ ಭಾರತಕ್ಕೆ ಪ್ರಯಾಣ ಬೆಳಸಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಇದರಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸಹ ಸೇರಿದ್ದಾರೆ.