ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರದಲ್ಲಿ 60-70 ಪಾಕ್​ ಉಗ್ರರು ಸಕ್ರಿಯ: ಲೆ.ಜನರಲ್‌ ಡಿ.ಪಿ.ಪಾಂಡೆ

ಐಜಿಪಿ ಮತ್ತು ಡಿಜಿಪಿ ತಿಳಿಸಿರುವ ಪ್ರಕಾರ 60 ರಿಂದ 70 ಮಂದಿ ಪಾಕ್​ ಉಗ್ರರು ಜಮ್ಮು-ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ಡಿ.ಪಿ.ಪಾಂಡೆ ಮಾಹಿತಿ ನೀಡಿದ್ದಾರೆ.

By

Published : Sep 20, 2021, 3:02 PM IST

ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ
ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ

ಶ್ರೀನಗರ (ಜಮ್ಮು ಕಾಶ್ಮೀರ): ಪಾಕಿಸ್ತಾನದ ಸುಮಾರು 60-70 ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ಡಿ.ಪಿ.ಪಾಂಡೆ ಮಾಹಿತಿ ನೀಡಿದ್ದಾರೆ.

ಪಾಕ್​ ಉಗ್ರರಿಂದ ಭಾರತದ ಗಡಿ ನುಸುಳುವ ಕೆಲವು ಪ್ರಯತ್ನಗಳು ನಡೆದಿವೆ. ಇದರಲ್ಲಿ ಎರಡು ಪ್ರಯತ್ನಗಳು ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಒಬ್ಬನನ್ನು ಸದೆಬಡಿಯಲಾಗಿದೆ. ಮತ್ತೊಬ್ಬನನ್ನು ಹುಡುಕುತ್ತಿದ್ದೇವೆ. ಉರಿಯಲ್ಲಿ ಒಳನುಸುಳುವಿಕೆ ಯತ್ನ ನಡೆದಿದೆ ಎಂದು ಶಂಕಿಸಲಾಗಿದೆ. ಅಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಐಜಿಪಿ ಮತ್ತು ಡಿಜಿಪಿ ತಿಳಿಸಿರುವ ಪ್ರಕಾರ 60 ರಿಂದ 70 ಮಂದಿ ಪಾಕ್​ ಉಗ್ರರು ಜಮ್ಮು-ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ. ಈ ವರ್ಷ ಕದನ ವಿರಾಮ ಉಲ್ಲಂಘನೆ ಹೆಚ್ಚಳವಾಗಿಲ್ಲ. ಕಾಶ್ಮೀರ ಕಣಿವೆಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆ ವರದಿಯಾಗಿಲ್ಲ ಎಂದರು.

ಇದನ್ನೂ ಓದಿ: ಮುಂಬೈ:ಮತ್ತೋರ್ವ ಶಂಕಿತ ಉಗ್ರನ ಬಂಧಿಸಿದ ಭಯೋತ್ಪಾದನಾ ನಿಗ್ರಹ ದಳ

ಕಳೆದ ಮಂಗಳವಾರ ದೆಹಲಿ ಪೊಲೀಸರು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಿದ್ದರು. ಬಂಧಿತರಲ್ಲಿ ಓರ್ವ ವಿಚಾರಣೆ ವೇಳೆ ಕರ್ನಾಟಕದ ಮೈಸೂರು, ಬೆಂಗಳೂರು ಸೇರಿ ದೇಶದ ವಿವಿಧ ಭಾಗಗಳಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವುದಾಗಿ ಬಾಯ್ಬಿಟ್ಟಿದ್ದ. ಬಳಿಕ ಮುಂಬೈ ಎಟಿಎಸ್ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ.

ABOUT THE AUTHOR

...view details