ಲಖನೌ :2023ರಲ್ಲಿ ನಡೆಯಲಿರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಬಿಜೆಪಿಯು ಲಖನೌನಿಂದ ದೆಹಲಿ ಮಟ್ಟದವರೆಗೆ ನಿರಂತರ ಸಭೆ ನಡೆಸುತ್ತಿದೆ. ಎಸ್ಪಿ (ಸಮಾಜವಾದಿ ಪಕ್ಷ) ಅಧ್ಯಕ್ಷ ಅಖಿಲೇಶ್ ಯಾದವ್ ಕೂಡ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಗದ್ದುಗೆ ಏರಲು ತಂತ್ರ ಹೆಣೆಯುತ್ತಿದ್ದಾರೆ.
ಸಣ್ಣಪುಟ್ಟ ಪಕ್ಷಗಳು ಕೂಡ ದೊಡ್ಡ ಮಟ್ಟದಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿವೆ. ಈ ಎಲ್ಲದರ ಮಧ್ಯೆ ಹೈದರಾಬಾದ್ನ ಫೈರ್ ಬ್ರಾಂಡ್ ಅಸಾದುದ್ದೀನ್ ಓವೈಸಿ ನೇತೃತ್ವದ ಪಕ್ಷ AIMIM 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದೆ.
ಈ ಬಗ್ಗೆ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ರಾಜ್ಯಾಧ್ಯಕ್ಷ ಶೌಕತ್ ಅಲಿ, 2022ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಹಲವಾರು ಸಭೆಗಳು ಸಹ ನಡೆದಿವೆ.