ಜೋಧ್‌ಪುರ: ಸ್ವಯಂಘೋಷಿತ ದೇವಮಾನವ ಮತ್ತು ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಅಸಾರಾಂ ಬಾಪೂಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಎದೆನೋವು, ಚಡಪಡಿಕೆ ಮತ್ತು ಇತರ ಕಾಯಿಲೆಗಳಿಂದಾಗಿ ಐಸಿಯು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ಬಾಪೂ ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಅವರ ಎಸ್‌ಪಿಒ ಮಟ್ಟ 90ಕ್ಕಿಂತ ಕಡಿಮೆ ಇದೆ. ಪ್ರಸ್ತುತ, ಅವರು ಜೋಧಪುರದ ಎಂಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ.