ಕರ್ನಾಟಕ

karnataka

ETV Bharat / bharat

ಅಸ್ಸೋಂ: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಎಸ್ ಅಧಿಕಾರಿ.. ಲಕ್ಷ ಲಕ್ಷ ನಗದು ವಶ

ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಅಸ್ಸೋಂ ಸರ್ಕಾರದ ಜಂಟಿ ಕಾರ್ಯದರ್ಶಿ ಕೆಕೆ ಶರ್ಮಾ ಅವರನ್ನು ಬಂಧಿಸಲಾಗಿದೆ.

ACS officer caught red handed while taking bribe
ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಎಸ್ ಅಧಿಕಾರಿ

By

Published : Oct 29, 2022, 1:35 PM IST

ಗುವಾಹಟಿ( ಅಸ್ಸೋಂ): ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಲೈಸೆನ್ಸ್ ನವೀಕರಣಕ್ಕಾಗಿ ಹಣ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಸ್ಸೋಂ ಸಿವಿಲ್ ಸರ್ವೀಸ್ (ಎಸಿಎಸ್) ಅಧಿಕಾರಿ ಕೆ.ಕೆ ಶರ್ಮಾ ಬಂಧಿತ ಆರೋಪಿ. ಇವರು ಅಸ್ಸೋಂ ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭದ್ರತಾ ಸಂಸ್ಥೆಯ ಪರವಾನಗಿ ನವೀಕರಣಕ್ಕಾಗಿ ದೂರುದಾರರಿಂದ 90,000 ರೂ.ಗಳನ್ನು ತೆಗೆದುಕೊಳ್ಳುತ್ತಿದ್ದಾಗ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜಂಟಿ ಕಾರ್ಯದರ್ಶಿ ಕೆ.ಕೆ.ಶರ್ಮಾ ಅವರನ್ನು ಬಂಧಿಸಿದ್ದಾರೆ. ಬಳಿಕ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಕೆ.ಕೆ.ಶರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, 49 ಲಕ್ಷಕ್ಕೂ ಅಧಿಕ ನಗದು ವಶಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ವಶಪಡಿಸಿಕೊಂಡ ನಗದು

ಲಭ್ಯವಿರುವ ಅಂಕಿ - ಅಂಶಗಳ ಪ್ರಕಾರ, ಕಳೆದ ವರ್ಷ ಮೇ 10 ರಿಂದ ಲಂಚದ ಆರೋಪದ ಮೇಲೆ ಕೆಲವು ಗೆಜೆಟೆಡ್ ಅಧಿಕಾರಿಗಳು ಸೇರಿದಂತೆ ಈವರೆಗೆ 64 ಸರ್ಕಾರಿ ನೌಕರರನ್ನು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿ & ವಿಎಸಿ) ಬಂಧಿಸಿದೆ ಎಂಬುದು ಇಲ್ಲಿ ಗಮನಾರ್ಹ ಅಂಶ.

ಇದನ್ನೂ ಓದಿ:ಸಿಬ್ಬಂದಿ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಎತ್ತಂಗಡಿ

ABOUT THE AUTHOR

...view details