ಬಾರ್ಪೇಟಾ(ಅಸ್ಸೋಂ):ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರ ಜಾಮೀನು ಅರ್ಜಿಯ ಕುರಿತು ಅಸ್ಸೋಂನ ಬಾರ್ಪೇಟಾ ಜಿಲ್ಲೆಯ ಸ್ಥಳೀಯ ನ್ಯಾಯಾಲಯವು ಇಂದು ತೀರ್ಪು ನೀಡಲಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇವಾನಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ಬಳಿಕ ನ್ಯಾಯಾಲಯ ಗುರುವಾರ ತೀರ್ಪು ಕಾಯ್ದಿರಿಸಿತ್ತು. ಬಾರ್ಪೇಟಾದ ಸೆಷನ್ ನ್ಯಾಯಾಧೀಶರು ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದೆ ಎಂದು ಜಿಗ್ನೇಶ್ ಮೇವಾನಿ ಅವರ ವಕೀಲ ಅಂಗ್ಸುಮನ್ ಬೋರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಮೊದಲು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್‌ಗಳಿಗೆ ಸಂಬಂಧಿಸಿದ ವಿಷಯಕ್ಕೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದ ಕೂಡಲೇ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ಪೇಟಾ ಪೊಲೀಸರು ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿದ್ದರು. ಅಸ್ಸೋಂ ಬಿಜೆಪಿ ಮುಖಂಡ ಅರುಪ್ ಕುಮಾರ್ ಡೇ ಅವರು ನೀಡಿದ ದೂರಿನ ಆಧಾರ ಮೇಲೆ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.