ಆಂಗ್ಲಾಂಗ್ (ಅಸ್ಸೋಂ): ಅಸ್ಸೋಂ ಬೊಕಾಜಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕೆಜಿ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಇಬ್ಬರು ಖದೀಮರನ್ನು ಬಂಧಿಸಿದ್ದಾರೆ. ಮಣಿಪುರದಿಂದ ಗುವಾಹಟಿಗೆ ತೆರಳುತ್ತಿದ್ದ ಲಾರಿಯಲ್ಲಿ ಚಿನ್ನ ಪತ್ತೆಯಾಗಿದೆ.
ಅಸ್ಸೋಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಬೊಕಾಜಾನ್‌ನಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮಣಿಪುರದ ಇಬ್ಬರು ಕಳ್ಳಸಾಗಣೆದಾರರು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು 8 ಕೆಜಿ ತೂಕದ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು.
ಮಣಿಪುರದಿಂದ ಗುವಾಹಟಿಗೆ ತೆರಳುತ್ತಿದ್ದ ಲಾರಿಯನ್ನು ತಡೆದ ಪೊಲೀಸರು ತಪಾಸಣೆ ನಡೆಸಿದಾಗ ವಾಹನದ ಇಂಜಿನ್ ಬಳಿ ಚಿನ್ನವನ್ನು ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.