ಅಸ್ಸೋಂ : ದತ್ತು ಮಗಳ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಪದ್ಮ ಪ್ರಶಸ್ತಿ ಪುರಸ್ಕೃತ ಉದ್ಧಬ್ ಭರಾಲಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ, ಉತ್ತರ ಲಖೀಂಪುರ ಪೊಲೀಸರು ಅಸ್ಸೋಂ ಮೂಲದ ಭರಾಲಿ ಅವರನ್ನ ವಶಕ್ಕೆ ಪಡೆದಿದ್ದಾರೆ.
ಕಳೆದ ತಿಂಗಳು ಅವರು ಮೇಲೆ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೆಟ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.
ಪ್ರಕರಣ ದಾಖಲಾದ ಬಳಿಕ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಗೌಹಾಟಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಆದರೆ, ನಿನ್ನೆ ಜಾಮೀನು ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಹೊಸ ಜಾಮೀನಿಗೋಸ್ಕರ ನ್ಯಾಯಾಯಲದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕಳೆದ ಕೆಲ ವರ್ಷಗಳ ಹಿಂದೆ ಬಾಲಕಿ ದತ್ತು ಪಡೆದುಕೊಂಡಿದ್ದ ಉದ್ಭಬ್ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆಂಬ ಆರೋಪ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಉದ್ಧಬ್ ಭಾರಾಲಿ ಜಾಮೀನು ಕೋರಿ ಗೌಹಾಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.