ನವದೆಹಲಿ :ದೇಶದಲ್ಲಿ ಕೊರೊನಾ, ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಕೇಂದ್ರ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಕೈಗೊಂಡಿದ್ದು, ಫೆಬ್ರವರಿ 11ರವರೆಗೆ ಯಾವುದೇ ರೀತಿಯ ರೋಡ್ ಶೋ ಹಾಗೂ ರ್ಯಾಲಿ ನಡೆಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಜನವರಿ 8ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದ ಚುನಾವಣಾ ಆಯೋಗ, ಜನವರಿ 15ರವರೆಗೆ ಸಾರ್ವಜನಿಕ ರ್ಯಾಲಿ, ರೋಡ್ ಶೋಗಳು ಮತ್ತು ಪ್ರಚಾರ ಕಾರ್ಯಕ್ರಮಗಳ ಮೇಲೆ ನಿಷೇಧ ಹೇರಿತ್ತು.
ಇದಾದ ಬಳಿಕ ಈ ದಿನಾಂಕವನ್ನ ಜನವರಿ 31ರವರೆಗೆ ವಿಸ್ತರಣೆ ಮಾಡಿತ್ತು. ಆದರೆ, ಇದೀಗ ಮತ್ತೊಮ್ಮೆ ಮಹತ್ವದ ನಿರ್ಧಾರ ಕೈಗೊಂಡಿರುವ ಚುನಾವಣಾ ಆಯೋಗ ಫೆ.11ರವರೆಗೆ ಇದನ್ನ ಮುಂದುವರಿಕೆ ಮಾಡಿದೆ.