ನವದೆಹಲಿ:ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ.
ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 23 ರಂದು ರಾಜಸ್ಥಾನ, ನವೆಂಬರ್ 30 ರಂದು ತೆಲಂಗಾಣ, ಛತ್ತೀಸ್‌ಗಢದಲ್ಲಿ ನವೆಂಬರ್ 7ಕ್ಕೆ ಮೊದಲ ಹಂತದ ಮತದಾನ ನಡೆದರೆ, ನ.17 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ಇಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು,"40 ದಿನಗಳಲ್ಲಿ ಎಲ್ಲಾ 5 ರಾಜ್ಯಗಳಿಗೆ ಭೇಟಿ ನೀಡಿ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಜಾರಿ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಲಾಗಿದೆ" ಎಂದು ಅವರು ತಿಳಿಸಿದರು.
''ಮಿಜೋರಾಂನಲ್ಲಿ ಒಟ್ಟು ಮತದಾರರು 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ. ಸುಮಾರು 60 ಲಕ್ಷ ಮೊದಲ ಬಾರಿಗೆ ಮತದಾರರು (18-19 ವರ್ಷ) 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಯುವ ಮತದಾರರನ್ನು ಪ್ರೇರೇಪಿಸಲು, 2,900ಕ್ಕೂ ಹೆಚ್ಚು ಮತಗಟ್ಟೆಗಳನ್ನು ಯುವಕರು ನಿರ್ವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪನೆ: ''ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಮುಂಬರುವ 2023 ರ ವಿಧಾನಸಭಾ ಚುನಾವಣೆಗೆ 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. 17,734 ಮಾದರಿ ಮತಗಟ್ಟೆಗಳಿದ್ದು, 621 ಮತಗಟ್ಟೆಗಳನ್ನು ಪಿಡಬ್ಲ್ಯೂಡಿ ಸಿಬ್ಬಂದಿ ನಿರ್ವಹಿಸುತ್ತಾರೆ. 8,192 ಪಿಎಸ್ ಮಹಿಳೆಯರು ಕಮಾಂಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ'' ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ವಿಷಯ:ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಯ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, "ಭದ್ರತಾ ಪರಿಸ್ಥಿತಿ ಮತ್ತು ರಾಜ್ಯದ ಇತರ ಏಕಕಾಲಿಕ ಚುನಾವಣೆಗಳಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಉತ್ತರಿಸಿದರು.
ಇದನ್ನೂ ಓದಿ:Assembly elections 2023: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟಣೆ ಸಾಧ್ಯತೆ