ನವದೆಹಲಿ:ಪಶ್ಚಿಮ ಬಂಗಾಳ ಮತ್ತು ಅಸ್ಸೋಂನಲ್ಲಿ ಇಂದು ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳ ಮತ್ತು ಅಸ್ಸೋಂನಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಅರ್ಹ ಮತದಾರರು ಮತದಾನ ಮಾಡಬೇಕು. ವಿಶೇಷವಾಗಿ ಯುವ ಜನತೆ ಹೆಚ್ಚಿನ ಆಸಕ್ತಿಯಿಂದ ಮತಗಟ್ಟೆಗೆ ಆಗಮಿಸಿ ಹಕ್ಕನ್ನು ಚಲಾಯಿಸುವಂತೆ ವಿನಂತಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿರುವ 30 ಕ್ಷೇತ್ರಗಳ ಪೈಕಿ 27ರಲ್ಲಿ ಪ್ರಸಕ್ತ ಟಿಎಂಸಿ ಶಾಸಕರಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಇನ್ನೊಂದು ಕ್ಷೇತ್ರದಲ್ಲಿ ಆರ್‌ಎಸ್‌ಪಿ ಶಾಸಕರು ಸ್ಪರ್ಧೆ ನಡೆಸುತ್ತಿದ್ದಾರೆ.