ಸುಕ್ಮಾ(ಛತ್ತೀಸ್ಗಢ):ಇಲ್ಲಿನ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆ ತೆರಳಿದ್ದ ಸಂದರ್ಭದಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ.
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) 9 ಮಂದಿ ಜವಾನರು ಸಂಘರ್ಷದಲ್ಲಿ ಹುತಾತ್ಮರಾಗಿದ್ದಾರೆ. ಇನ್ನುಳಿದಂತೆ 31ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ 21 ಮಂದಿ ಯೋಧರು ನಾಪತ್ತೆಯಾಗಿದ್ದಾರೆ.
ಶನಿವಾರ ಬೆಳಗ್ಗೆಯಿಂದಲೇ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಎನ್ಕೌಂಟರ್ ನಡೆದಿತ್ತು. ಇಲ್ಲಿಯವರೆಗೆ 9 ಮಂದಿ ನಕ್ಸಲರನ್ನೂ ಹೊಡೆದುರುಳಿಸಲಾಗಿದೆ. ಜೊತೆಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.