ಪ್ರಯಾಗ್‌ರಾಜ್ (ಉತ್ತರ ಪ್ರದೇಶ):ಅತೀಕ್ ಅಹ್ಮದ್ ಮತ್ತು ಆತನ ಕಿರಿಯ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅನ್ನು ಪ್ರಯಾಗರಾಜ್ ಪೊಲೀಸರು ಗುರುವಾರ ಕೋರ್ಟ್ಗೆ ಹಾಜರುಪಡಿಸಿ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
ಮಾಫಿಯಾ-ರಾಜಕಾರಣಿ ಅತಿಕ್ ಅಹ್ಮದ್, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ದೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅನ್ನು ಪ್ರಯಾಗರಾಜ್ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗುರುವಾರ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಇಬ್ಬರ ಪೊಲೀಸ್ ಕಸ್ಟಡಿಯು ಏಪ್ರಿಲ್ 17 ರಂದು ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ.
ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅನ್ನು ಗುರುವಾರ ಬೆಳಗ್ಗೆ ಪ್ರಯಾಗರಾಜ್‌ನಲ್ಲಿರುವ ಸಿಜೆಎಂ ನ್ಯಾಯಾಲಯಕ್ಕೆ ಕರೆತರಲಾಯಿತು. ಉತ್ತರ ಪ್ರದೇಶ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಅತೀಕ್ ಅಹ್ಮದ್ ದಾಖಲಾದ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಪಾಕಿಸ್ತಾನದ ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ನೇರ ಸಂಪರ್ಕ ಹೊಂದಿರುವ ಕಾರಣ ತನಗೆ ಶಸ್ತ್ರಾಸ್ತ್ರಗಳ ಕೊರತೆಯಿಲ್ಲ ಎಂದು ಅತಿಕ್ ಹೇಳಿಕೆಯನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಡ್ರೋನ್‌ಗಳ ಸಹಾಯದಿಂದ ಪಂಜಾಬ್ ಗಡಿಯಲ್ಲಿ ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ತರಲಾಯಿತು. ಸ್ಥಳೀಯ ಸಂಪರ್ಕಗಳು ಅವುಗಳನ್ನು ಸಂಗ್ರಹಿಸಿ ನಮಗೆ ಒದಗಿಸುತ್ತವೆ. ಅಷ್ಟೇ ಅಲ್ಲ ಪಾಕಿಸ್ತಾನದಿಂದ ಬರುವ ಶಸ್ತ್ರಾಸ್ತ್ರಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕರು ಪಡೆಯುತ್ತಾರೆ ಎಂದು ಅವರು ಹೇಳಿದರು.
ಝಾನ್ಸಿಯಲ್ಲಿ ಗುರುವಾರ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಡೆಸಿದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಅವರ ಸಹಾಯಕ ಗುಲಾಮ್ ಸಾವನ್ನಪ್ಪಿದ್ದಾರೆ. ಮೃತರಿಬ್ಬರೂ ಉಮೇಶ್ ಪಾಲ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ತಲಾ 5 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದರು. ಅಷ್ಟೇ ಅಲ್ಲ ಮೃತ ಆರೋಪಿಗಳಿಂದ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.