ಹೈದರಾಬಾದ್ :ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕಾಗಿ ನಾಲ್ವರು ಯುವಕರು ಸೇರಿಕೊಂಡು ಅಸಿಸ್ಟೆಂಟ್ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಬಂಧನ ಮಾಡಲಾಗಿದೆ.
ಹಳೆ ಹೈದರಾಬಾದ್ನ ವಿವಿಧ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ವಿದ್ಯುತ್ ಬಿಲ್ ವಸೂಲಿ ಕಾರ್ಯದಲ್ಲಿ ವಿದ್ಯುತ್ ಇಲಾಖೆ ಸಹಾಯಕ ಎಂಜಿನಿಯರ್ ವಿಜಯ್ ಕುಮಾರ್ ಭಾಗಿಯಾಗಿದ್ದರು. ವಾಲ್ಮೀಕಿನಗರದ ಮನೆವೊಂದರಲ್ಲಿ ಕಳೆದ ಎರಡು ವರ್ಷದಿಂದ ಬಿಲ್ ಪಾವತಿ ಮಾಡಿರಲಿಲ್ಲ. ಹೀಗಾಗಿ, 17,714 ರೂ. ಪಾವತಿ ಬಾಕಿ ಉಳಿದಿತ್ತು. ಈ ವೇಳೆ ಮಹಿಳೆಗೆ ಮಾಹಿತಿ ನೀಡಿ, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.