ಕರ್ನಾಟಕ

karnataka

ETV Bharat / bharat

ಭಾರತದ ಅಡಿಪಾಯದ ಮೇಲೆ ದಾಳಿ: ರಾಹುಲ್ ಗಾಂಧಿ ಆರೋಪ

ಇಂದು ಭಾರತದ ಅಡಿಪಾಯದ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Indias foundation under attack says Rahul Gandhi
Indias foundation under attack says Rahul Gandhi

By

Published : Jun 23, 2023, 7:04 PM IST

ಪಾಟ್ನಾ: ಭಾರತದ ದೇಶದ ಅಡಿಪಾಯದ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರತಿಪಕ್ಷಗಳು ಹೊಂದಾಣಿಕೆಯಿಂದ ಒಟ್ಟಾಗಿ ಕೆಲಸ ಮಾಡಲಿವೆ ಮತ್ತು ಸಾಮಾನ್ಯ ಸೈದ್ಧಾಂತಿಕ ಮೌಲ್ಯಗಳನ್ನು ಕಾಪಾಡಲಿವೆ ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಾಟ್ನಾದಲ್ಲಿ ಪ್ರಾರಂಭವಾಗುವುದು ಸಾಮೂಹಿಕ ಚಳುವಳಿಯಾಗಿ ಬದಲಾಗುತ್ತದೆ ಎಂದು ಹೇಳಿದರು. ನಮ್ಮನ್ನು ವಿರೋಧ ಪಕ್ಷ ಎಂದು ಕರೆಯಬೇಡಿ, ನಾವೂ ದೇಶದ ಪ್ರಜೆಗಳು ಎಂದು ಹೇಳಿದರು.

ಇದಕ್ಕೂ ಮೊದಲು, 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರೋಧಿ ರಂಗ ರಚನೆಯ ಮಾರ್ಗಸೂಚಿಯನ್ನು ರೂಪಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯೋಜಿಸಿದ್ದ ವಿಶಾಲ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಕಾಂಗ್ರೆಸ್, ಎಎಪಿ, ಎನ್‌ಸಿಪಿ, ಟಿಎಂಸಿ ಸೇರಿದಂತೆ 17 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸಭೆಗೂ ಮುನ್ನ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಸೋಲಿಸಲಿವೆ. ಒಂದೆಡೆ ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಿದ್ಧಾಂತ ಮತ್ತೊಂದೆಡೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ‘ಭಾರತ್ ತೋಡೋ’ ಸಿದ್ಧಾಂತಗಳಿವೆ ಎಂದು ರಾಹುಲ್ ಗಾಂಧಿ ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಪ್ರತಿಪಕ್ಷಗಳ ಸಭೆಯನ್ನು 'ಫೋಟೋ ಸೆಷನ್' ಎಂದು ಬಿಜೆಪಿ ಟೀಕಿಸಿದೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಜಂಟಿ ಪತ್ರಿಕಾಗೋಷ್ಠಿಗೆ ಗೈರುಹಾಜರಾಗಿದ್ದರು. ಅವರು ಮರಳಿ ಪ್ರಯಾಣ ಬೆಳೆಸಲು ವಿಮಾನ ಹತ್ತುವ ತುರ್ತು ಇದ್ದುದರಿಂದ ಬೇಗನೆ ತೆರಳಿದರು ಎಂದು ಶ್ರೀ ಕುಮಾರ್ ಹೇಳಿದ್ದಾರೆ.

ಸುಗ್ರೀವಾಜ್ಞೆ ವಿಚಾರದಲ್ಲಿ ಕಾಂಗ್ರೆಸ್ ಜೊತೆಗಿನ ತಿಕ್ಕಾಟದಿಂದಾಗಿ ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗೈರಾಗಿದೆ ಎಂಬ ಊಹಾಪೋಹಗಳ ನಡುವೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಕೇಜ್ರಿವಾಲ್ ಅವರು ದೆಹಲಿಗೆ ಹಿಂತಿರುಗಬೇಕಾಗಿರುವುದರಿಂದ ಅವರು ಹಾಜರಾಗಿರಲಿಲ್ಲ ಎಂದು ವಿವರಿಸಿದರು.

ಇದಕ್ಕೂ ಮೊದಲು, ಈ ಸಭೆಯ ಬಗ್ಗೆ ವ್ಯಂಗ್ಯವಾಡಿದ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ, ಇಂದು ಪಾಟ್ನಾದಲ್ಲಿ ಫೋಟೋ ಸೆಷನ್ ನಡೆಯುತ್ತಿದೆ. ಅವರು (ಪ್ರತಿಪಕ್ಷಗಳು) ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಸವಾಲು ಹಾಕಲು ಬಯಸುತ್ತಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಪ್ರಧಾನಿ ಮೋದಿ ತಮ್ಮ ಸರ್ಕಾರವನ್ನು ರಚಿಸುತ್ತಾರೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದರು.

ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಲು ಪ್ರತಿಪಕ್ಷ ನಾಯಕರ ನಿರ್ಧಾರ, ಮುಂದಿನ ಸಭೆ ಶಿಮ್ಲಾದಲ್ಲಿ

ABOUT THE AUTHOR

...view details