ಸೋಲಾಪುರ/ಮಹಾರಾಷ್ಟ್ರ: ಮರಾಠಾ ಮೀಸಲಾತಿಗಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರು ಕರ್ನಾಟಕದ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ, ಆದರೆ ಕಲ್ಲು ತೂರಾಟದಿಂದ ಬಸ್ ಗಾಜಿಗೆ ಹಾನಿಯಾಗಿದೆ.
ಸೋಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದ ಸೋಲಾಪುರದಲ್ಲಿ ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಕೆಲ ಯುವಕರು ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಸ್ ಮೇಲೆ ಕಲ್ಲು ತೂರಾಟ
ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ಮರಾಠಾ ಕ್ರಾಂತಿ ಮೋರ್ಚಾ ವತಿಯಿಂದ ಸೋಲಾಪುರದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿಲ್ಲ.
ಆದರೂ ಮೋರ್ಚಾದ ಸಂಘಟಕರು ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯ ಬಳಿಕ ಕೆಲವು ಯುವಕರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಕರ್ನಾಟಕದ ತೆರದಾಳದಿಂದ ಸೋಲಾಪುರಕ್ಕೆ ಸಂಚರಿಸುತ್ತಿದ್ದ ಬಸ್ ಮೇಲೂ ಕಲ್ಲು ತೂರಿದ್ದಾರೆ. ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ.