ಜಮ್ಶೆಡ್‌ಪುರ( ಜಾರ್ಖಂಡ್):ನಡುರಸ್ತೆಯಲ್ಲೇ ಯುವತಿಗೆ ಚಾಕುವಿನಿಂದ ಇರಿದ ವ್ಯಕ್ತಿಯೊಬ್ಬ ಸ್ಥಳದಿಂದ ಪರಾರಿಯಾಗಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಜಾರ್ಖಂಡ್ನ ಜಮ್ಶೆಡ್‌ಪುರದಲ್ಲಿ ಈ ಪ್ರಕರಣ ನಡೆದಿದೆ.
ಯುವತಿಗೆ ಚಾಕುವಿನಿಂದ ಇರಿದು ಪರಾರಿಯಾದ ವ್ಯಕ್ತಿ ಇಲ್ಲಿನ ಜುಗ್ಸಲೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಯುವಕ ರಸ್ತೆ ಪಕ್ಕದಲ್ಲಿ ನಿಂತಿದ್ದ ಯುವತಿಗೆ ಏಕಾಏಕಿ ಚಾಕುವಿನಿಂದ ಇರಿದು, ಕೊಲೆ ಮಾಡಲು ಯತ್ನಿಸಿದ್ದಾನೆ. ತಕ್ಷಣವೇ ಆಕೆಯನ್ನ ಸ್ಥಳೀಯ ಸದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿಸಿಟಿವಿ ದೃಶ್ಯಾವಳಿ ವಶಕ್ಕೆ ಪಡೆದುಕೊಂಡು, ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿರಿ:ಅಂತ್ಯಕ್ರಿಯೆ ಮಾಡುವಾಗ ಅಚ್ಚರಿ.. ಕಣ್ತೆರೆದು ಮಾತಾಡಿದ 'ಮೃತ ತಾತ'..!
ಲಭ್ಯವಾಗಿರುವ ಮಾಹಿತಿ ಪ್ರಕಾರ 22 ವರ್ಷದ ಕಾಂಚನ್ ಕುಮಾರಿ ಗೌಶಾಲ ನಾಲಾ ರಸ್ತೆಯಲ್ಲಿ ದೀಪ್ ಸೇಥಿ ಎಂಬ ಯುವಕನೊಂದಿಗೆ ಲಿವ್ - ಇನ್ ರಿಲೇಷನ್ನಲ್ಲಿದ್ದಳು. ಇಂದು ಬೆಳಗ್ಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ವೇಳೆ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಕುತ್ತಿಗೆ ಭಾಗಕ್ಕೆ ಚಾಕುವಿನಲ್ಲಿ ಇರಿದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಮತ್ತೊಮ್ಮೆ ಹೊಟ್ಟೆಯ ಭಾಗಕ್ಕೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಬೈಕ್ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾನೆ ಎಂಬುದರ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಅರವಿಂದ್ ಕುಮಾರ್ ಈಗಾಗಲೇ ಯುವತಿಯ ವಿಚಾರಣೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.