ಹೈದರಾಬಾದ್ (ತೆಲಂಗಾಣ): ಹೈದರಾಬಾದ್ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಎಲ್.ಬಿ.ನಗರದಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಆಟೋ ಚಾಲಕನೋರ್ವ ಅತ್ಯಾಚಾರ ಎಸಗಿದ್ಧಾನೆ.
ಮೇ 31ರಂದು ಜುಬಿಲಿ ಹಿಲ್ಸ್ನಲ್ಲಿ ಪಬ್ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಪ್ರಕರಣ ತೆಲಂಗಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ದುಷ್ಕೃತ್ಯ ಬಯಲಿಗೆ ಬಂದಿದೆ. ಸಂತ್ರಸ್ತೆ ಬಾಲಕಿಯ ಪೋಷಕರು ಎಲ್.ಬಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ. ಈ ದೂರಿನ ಮೇರೆಗೆ ಆರೋಪಿ ಸಲೀಂ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.