ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವಂತಿಪೋರಾ ಬಳಿಯ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿರುವ ಪಡಗಂಪುರ ಗ್ರಾಮದಲ್ಲಿ ಎನ್‌ಕೌಂಟರ್ ನಡೆದಿದೆ.
ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಕೆಲವು ಉಗ್ರಗಾಮಿಗಳು ಇರುವ ಬಗ್ಗೆ ಖಚಿತವಾದ ಮಾಹಿತಿ ಪಡೆದ ನಂತರ ಸೇನೆ, ಸಿಆರ್‌ಪಿಎಫ್ ಮತ್ತು ಪೊಲೀಸರ ಜಂಟಿ ತಂಡವು ಗ್ರಾಮವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಮಾಡಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಸೇನಾಪಡೆ, ಪೊಲೀಸ್ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಶೋಧ ಕಾರ್ಯಾಚರಣೆ ನಡೆಸಿವೆ. ಈ ಸಂದರ್ಭದಲ್ಲಿ ಶಂಕಿತ ಸ್ಥಳವನ್ನು ಸಮೀಪಿಸಿದಾಗ ಅಡಗಿ ಕುಳಿತಿದ್ದ ಉಗ್ರರು ಜಂಟಿ ಸೇನಾ ಮತ್ತು ಪೊಲೀಸ್ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಈ ದಾಳಿಗೆ ಪ್ರತ್ಯುತ್ತರವಾಗಿ ಸೇನೆ ಎನ್‌ಕೌಂಟರ್ ಮಾಡಲು ಮುಂದಾಯಿತು.
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೂ ಗುಂಡು ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರನನ್ನು ಮಾಡಲಾಗಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಎನ್‌ಕೌಂಟರ್ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರ ಶವ ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ:ಕಾಂಗ್ರೆಸ್ ನಾಯಕ ಮೇಜರ್ ಸಿಂಗ್ ಧಲಿವಾಲ್‌ರನ್ನು ಗುಂಡಿಕ್ಕಿ ಹತ್ಯೆಗೈದ ಮಹಿಳೆ!
ಕುಲ್ಗಾಮ್‌ನಲ್ಲಿ ಎನ್‌ಕೌಂಟರ್:ಇಂದು ಮುಂಜಾನೆ ನಡೆದ ಕಾರ್ಯಾಚರಣೆ ರೀತಿಯಲ್ಲೇ ಫೆಬ್ರವರಿ 22 ಬುಧವಾರದಂದುಶೆರಿಚಂದೋಸಾ ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರಿಂದ ಕಾರ್ಯಾಚರಣೆ ನಡೆದಿತ್ತು.
ಗುರುವಾರ (ಫೆ. 23)ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೊಸರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಟ್ವಿಟರ್‌ನಲ್ಲಿ ಎನ್‌ಕೌಂಟರ್ ಬಗ್ಗೆ ವಿವರಗಳನ್ನು ಕಾಶ್ಮೀರ ವಲಯ ಪೊಲೀಸರು ನೀಡಿದ್ದಾರೆ, "ಕುಲ್ಗಾಮ್ ಜಿಲ್ಲೆಯ ಕೊಸರ್ನಾಗ್‌ನ ಇಸ್ತಾನ್ ಮಾರ್ಗ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರಗಾಮಿ ಸಾವನ್ನಪ್ಪಿದ್ದಾನೆ. ಹುಡುಕಾಟ ಇನ್ನೂ ಮುಂದುವರೆದಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ" ಬರೆಯಲಾಗಿತ್ತು.
ಭದ್ರತಾ ಪಡೆಗಳು ಬುಧವಾರ (ಫೆಬ್ರವರಿ 22) ಬಾರಾಮುಲ್ಲಾದ ಶೆರಿಚಂದೋಸಾ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಮೂಲಗಳ ಪ್ರಕಾರ, ಗುಂಡಿನ ಚಕಮಕಿಯಲ್ಲಿ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ, ಅಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಅರಣ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದವು. ಬಾರಾಮುಲ್ಲಾದ ಶೆರಿಚಂದೋಸಾ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಗುರುವಾರ ಬೆಳಗ್ಗೆ ಶೋಧ ಕಾರ್ಯಾಚರಣೆಯನ್ನು ಪುನಾರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದರು.
ಇದನ್ನೂ ಓದಿ:ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ